ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾ ಪ್ರಾರಂಭೋತ್ಸವ

0

ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿದ ನ್ಯಾಯಾಧೀಶರು ಮತ್ತು ಪೊಲೀಸ್ ವೃತ್ತ ನಿರೀಕ್ಷರು

ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶಾಲಾ ಪ್ರಾರಂಭೋತ್ಸವ ಇಂದು ಅದ್ದೂರಿಯಾಗಿ ನಡೆಯಿತು. ಶಾಲಾ ವಿದ್ಯಾರ್ಥಿಗಳು ಮೆರವಣಿಗೆಯ ಮೂಲಕ ಬಂದು ಶಾಲೆಯ ಮುಖ್ಯ ದ್ವಾರದ ಬಳಿ ಬರುತ್ತಿದ್ದಂತೆ ಸುಳ್ಯ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಮೋಹನ್ ಬಾಬು, ಹಾಗೂ ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ಸಿ ಎಮ್ ರವೀಂದ್ರ, ಹಿರಿಯ ನ್ಯಾಯಾಧೀಶ ಎಂ ವೆಂಕಪ್ಪಗೌಡ, ಶಾಲಾ ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತಾಯ ಸೇರಿದಂತೆ ಗಣ್ಯರುಗಳು ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿ ಬರಮಾಡಿಕೊಂಡರು.

ಬಳಿಕ ಶಾಲಾ ಸಭಾಂಗಣದಲ್ಲಿ ನಡೆದ ಶಾಲಾ ಪ್ರಾರಂಭೋತ್ಸವದ ಸಭಾ ಕಾರ್ಯಕ್ರಮವನ್ನು ಹಿರಿಯ ನ್ಯಾಯಾಧೀಶ ಮೋಹನ್ ಬಾಬು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳ ಶಾಲೆಯೊಂದಿಗಿನ ಭಾಂದವ್ಯ,ಹಾಗೂ ಅಧ್ಯಾಪಕರುಗಳೊಂದಿಗೆ ವಿದ್ಯಾರ್ಥಿಗಳ ಒಡನಾಟದ ಇವುಗಳ ಮೇಲೆ ಶಾಲೆಯ ಅಭಿವೃದ್ಧಿ ಮತ್ತು ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಗೊಳ್ಳುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ರಾಜೇಶ್ವರಿ ಕಾಡು ತೋಟ ವಹಿಸಿದ್ದರು. ವೇದಿಕೆಯಲ್ಲಿ ಸುಳ್ಯ ನ್ಯಾಯಾಲಯದ ಕಿರಿಯ ನ್ಯಾಯಾಧೀಶೆ ಕು.ಅರ್ಪಿತಾ, ನಗರ ಪಂಚಾಯತ್ ಸದಸ್ಯರುಗಳಾದ ಎಂ ವೆಂಕಪ್ಪಗೌಡ, ಡೇವಿಡ್ ದೀರಾ ಕ್ರಾಸ್ತಾ, ಸುಳ್ಯ ನ್ಯಾಯಾಲಯದ ಎಪಿಪಿ ಅರೋಣ್ ಡಿಸೋಜಾ, ಸುಳ್ಯ ವೃತ್ತ ನಿರೀಕ್ಷಕ ಸಿಎಂ ರವೀಂದ್ರ, ಹಾಗೂ ಎಸ್ಡಿಎಂಸಿ ಸದಸ್ಯರುಗಳು, ಅಧ್ಯಾಪಕ ವೃಂದದವರು,ಸುಳ್ಯ ನ್ಯಾಯಾಲಯದ ನ್ಯಾಯವಾದಿಗಳು ಉಪಸ್ಥಿತರಿದ್ದರು.


ಈ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದ ನಗರ ಪಂಚಾಯತಿ ಸದಸ್ಯರುಗಳಿಂದ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ಸಾಂಕೇತಿಕವಾಗಿ ವಿತರಿಸಲಾಯಿತು.
ಶಾಲಾ ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ ಸ್ವಾಗತಿಸಿ ಹಿರಿಯ ಶಿಕ್ಷಕ ಡಾ.ಸುಂದರ್ ಕೇನಾಜೆ ವಂದಿಸಿದರು. ಶಿಕ್ಷಕಿ ಚಂದ್ರಮತಿ ಕಾರ್ಯಕ್ರಮ ನಿರೂಪಿಸಿದರು ಶಾಲೆಗೆ ನೂತನವಾಗಿ ದಾಖಲೆಯಾದ ವಿದ್ಯಾರ್ಥಿಗಳ ಪೋಷಕರು, ವಕೀಲರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.