ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾರಂಭೋತ್ಸವ – ಅದ್ದೂರಿ ಸ್ವಾಗತ

0

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾರಂಭೋತ್ಸವವು ಮೇ.31 ರಂದು ನಡೆಯಿತು.
ಶಾಸಕಿ ಭಾಗೀರಥಿ ಮುರುಳ್ಯ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿ ಮಾತನಾಡಿದರು.
ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀನಾಥ ರೈ ಬಾಳಿಲ, ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ, ಸುಳ್ಯ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ,ಶಿಕ್ಷಣ ಸಂಯೋಜಕಿ ನಳಿನಿ, ಪ್ರಾಥಮಿಕ ವಿಭಾಗದ ಮುಖ್ಯ ಗುರು ಮಾಯಿಲಪ್ಪ,ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಸವಿತಾ ಉಪಸ್ಥಿತರಿದ್ದರು.


ಕಾಲೇಜಿನ ಉಪಪ್ರಾಂಶುಪಾಲೆ ಶ್ರೀಮತಿ ಉಮಾಕುಮಾರಿ ಸ್ವಾಗತಿಸಿ ವಂದಿಸಿದರು.
ಸನ್ಮಾನ
ನೂತನ ಶಾಸಕಿ ಭಾಗೀರಥಿ ಮುರುಳ್ಯರವರನ್ನು ಶಾಲಾ ವತಿಯಿಂದ ಮತ್ತು ಎಸ್.ಡಿ.ಎಂ.ಸಿ.ವತಿಯಿಂದ ಫಲ,ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.