ಜೂ.07 : ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಬೆಳ್ಳಾರೆ ವಲಯದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯದತ್ತ ವೃತ ಪೂಜೆ

0

ಒಡಿಯೂರು ಶ್ರೀ ಚಾರಿಟೇಬಲ್ ಟ್ರಸ್ಟ್ ,ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಸಂಚಾಲಿತ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಬೆಳ್ಳಾರೆ ವಲಯದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯದತ್ತ ವೃತ ಪೂಜೆ ಜೂ.07 ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಂಟೆ 8.30 ಕ್ಕೆ ಸಾಮೂಹಿಕ ಪ್ರಾರ್ಥನೆ, ಶ್ರೀ ಸತ್ಯದತ್ತ ವೃತ ಪೂಜೆ ಆರಂಭ, ಗಂಟೆ 9.00 ಕ್ಕೆ ಭಜನೆ ಗುರುದೇವ ಮಹಿಳಾ ಭಜನಾ ಮಂಡಳಿ ಐವರ್ನಾಡು ಮತ್ತು ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿ ಅಜಪಿಲ ಇವರಿಂದ ನಡೆಯಲಿದೆ.
ಬೆಳಿಗ್ಗೆ ಗಂಟೆ 10.30 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಮಾಜಿ ಸೈನಿಕರಾದ ಶ್ರೀಧರ ಗೌಡ ಕಡೀರ, ಶ್ರೀಧರ ಗೌಡ ದೇವರಕಾನ, ರಾಷ್ಟ್ರೀಯ ಕ್ರೀಡಾಪಟು ಆನಂದ ಕಲ್ಮಡ್ಕ ಇವರನ್ನು ಸನ್ಮಾನಿಸಲಾಗುವುದು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಹಲವು ಜನ ಗಣ್ಯರು ಉಪಸ್ಥಿತರಿರುವರು.

LEAVE A REPLY

Please enter your comment!
Please enter your name here