ಶಾಂತಿನಗರ : ಶಾಲಾ ಪ್ರಾರಂಭೋತ್ಸವ

0

ಶಾಂತಿನಗರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇದರ ಪ್ರಾರಂಭೋತ್ಸವ ಇಂದು ಅದ್ದೂರಿಯಿಂದ ನಡೆಯಿತು.


ಪ್ರಾರಂಭೋತ್ಸವದ ಸಭಾಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ನಜೀರ್ ಶಾಂತಿನಗರ ವಹಿಸಿದ್ದರು. ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಮಕ್ಕಳ ಆಕರ್ಷಕ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ಬ್ಯಾಂಡ್ ಭಾಜಾ ದೊಂದಿಗೆ ಮಕ್ಕಳು ಶಾಲೆಯತ್ತ ಹೆಜ್ಜೆ ಇಟ್ಟರು. ಈ ವರ್ಷ ಶಾಲೆಗೆ ದಾಖಲೆಯಾದ ವಿದ್ಯಾರ್ಥಿಗಳನ್ನು ಹೂ ಗುಚ್ಛ ನೀಡಿ ಶಾಲೆಗೆ ಬರಮಾಡಿಕೊಂಡರು.


ಬಳಿಕ ನಡೆದ ಪ್ರಾರಂಭೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಪುಸ್ತಕಗಳನ್ನು ವಿತರಿಸಲಾಯಿತು.
ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ತುಳಸಿ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ಗೋಪಿ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.


ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ನಜೀರ್ ಶಾಂತಿನಗರ ಅನಾಥ ವಿದ್ಯಾರ್ಥಿಗಳನ್ನು ಒಂದು ವರ್ಷಕ್ಕೆ ದತ್ತು ಪಡೆದುಕೊಂಡರು.
ಸಮಾರಂಭದ ಬಳಿಕ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸಿಹಿ ವಿತರಣೆ ನಡೆಯಿತು.
ಈ ಎಲ್ಲಾ ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಸದಸ್ಯರು, ವಿದ್ಯಾರ್ಥಿಗಳ ಪೋಷಕರು ಭಾಗವಹಿಸಿ ಸಹಕರಿಸಿದರು.

ಶಿಕ್ಷಕರಾದ ರಘುನಾಥ ಸ್ವಾಗತಿಸಿ ರಮ್ಯಾ ಕುಮಾರಿ ವಂದಿಸಿ,ಪ್ರತಿಭಾ ಕಾರ್ಯಕ್ರಮ ನಿರೂಪಿಸಿದರು.