ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಪ್ರಾರಂಭೋತ್ಸವ

0

ಪೆರ್ನಾಜೆ: ಶ್ರೀ ಸೀತಾರಾಘವ ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗದಲ್ಲಿ ಮೇ 31 ರಂದು ಶಾಲಾ ಪ್ರಾರಂಭೋತ್ಸವ ನಡೆಯಿತು. ಸಂಸ್ಥೆಯ ಅಧ್ಯಕ್ಷ ಪೆರ್ನಾಜೆ ಶಂಕರನಾರಾಯಣಭಟ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದು, ಜ್ಯೋತಿ ಬೆಳಗಿಸುವುದರ ಮೂಲಕ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು.

ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಮಳಿ ರಾಮಚಂದ್ರ ಭಟ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಕ್ಕಳಿಗೆ ಶುಭ ಹಾರೈಸಿದರು, ಕಾಲೇಜು ವಿಭಾಗದ ಪ್ರಾಚಾರ್ಯರಾದ ಮ೦ಟಯ್ಯರವರು ಪ್ರಾರಂಭೋತ್ಸವದ ಕುರಿತು ವಿದ್ಯಾರ್ಥಿಗಳಿಗೆ ಹಿತನುಡಿದರು.

ಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಜಾತರವರು ಸ್ವಾಗತ ಮತ್ತು ಪ್ರಾಸ್ತಾವಿಕವಾಗಿ ಮತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಬಾಲಕೃಷ್ಣ ವಂದನಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಬೋಧಕ ವೃಂದ, ವಿದ್ಯಾರ್ಥಿಗಳು ಪೋಷಕರು ಭಾಗವಹಿಸಿದ್ದರು.