ದಕ್ಷಿಣ ಕನ್ನಡ ಜಿಲ್ಲೆ ಸಹಿತ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಂಭವ

0

ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಮುಂದಿನ 48 ಗಂಟೆಯೊಳಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಲಬುರ್ಗಿ, ಬಳ್ಳಾರಿ, ಧಾರವಾಡ ಜಿಲ್ಲೆಗಳಲ್ಲಿ ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾದ್ಯತೆ ಇದ್ದು ಎಚ್ಚರಿಕೆಯಿಂದ ಇರುವಂತೆ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಉತ್ತರ ಒಳನಾಡು, ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯಾಗಲಿದ್ದು, ಘಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಭಾರೀ ಮಳೆಯಾಗುವ ಸಾದ್ಯತೆ ಹಿನ್ನೆಲೆ ಜನರು ಅನಗತ್ಯ ಪ್ರಯಾಣ ತಪ್ಪಿಸಬೇಕು, ಪ್ರಯಾಣವೇಳೆ ಎಚ್ಚರಿಕೆಯಿಂದ ಚಾಲನೆ ಮಾಡಬೇಕು, ಆದಷ್ಟು ಸುರಕ್ಷಿತ ಆಶ್ರಯ ಪಡೆಯಿರಿ. ಬಿರುಗಾಳಿ ಸಹಿತ ಮಳೆ ಬೀಳುವಾಗ ಹೊರಗಡೆ ನಿಲ್ಲುವುದು ಬೇಡ ಮನೆಯೊಳಗೆ ಇರುವಂತೆ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಳೆ ಬರುವ ವೇಳೆ ಕಿಟಕಿ ಬಾಗಿಲುಗಳನ್ನು ಮುಚ್ಚಬೇಕು. ಕಾಂಕ್ರೀಟ್ ಗೋಡೆಗಳಿಗೆ ಒರಗದಂತೆ. ಗುಡುಗು ಸಿಡಿಲು ಸಹಿತ ಮಳೆಯಾಗುವ ವೇಳೆ ವಿದ್ಯುತ್‌ಎಲೆಕ್ಟ್ರಾನಿಕ್ ಉಪಕರಣಗಳನ್ನು ಅನ್‌ಪ್ಲಗ್ ಮಾಡುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

LEAVE A REPLY

Please enter your comment!
Please enter your name here