ರೋಟರಿ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ

0

ರೋಟರಿ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ ಮೇ.31 ರಂದು ನಡೆಯಿತು.


ಆಕರ್ಷಕ ಪಥ ಸಂಚಲನ , ಬ್ಯಾಂಡ್ ವಾದನದೊಂದಿಗೆ ಎಲ್ಲಾ ಮಕ್ಕಳನ್ನು ಬರ ಮಾಡಿಕೊಳ್ಳಲಾಯಿತು.


ರೋಟರಿ ವಿದ್ಯಾ ಸಂಸ್ಥೆಯ ಸಂಚಾಲಕರಾದ ರೊ. ಗಿರಿಜಾ ಶಂಕರ್ ತುದಿಯಡ್ಕ ದೀಪ ಬೆಳಗಿಸಿ, ಮಕ್ಕಳಿಗೆ ಶುಭ ಹಾರೈಸಿದರು. ಪ್ರತಿಭಾನ್ವಿತ ವಿದ್ಯಾರ್ಥಿ ಕುಮಾರಿ ಪ್ರಣಮ್ಯ. ಎನ್ .ಆಳ್ವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.


ಮುಖ್ಯ ಶಿಕ್ಷಕಿ ಶ್ರೀಮತಿ ವೀಣಾ ಶೇಡಿಕಜೆ ಸ್ವಾಗತಿಸಿ , ವಂದಿಸಿದರು.
ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.