ಕೊಡಿಯಾಲಬೈಲು ಶಾಲಾ ಪ್ರಾರಂಭೋತ್ಸವ

0

ಕೊಡಿಯಾಲಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಇಂದು ಬಹಳ ವಿಜೃಂಭಣೆಯಿಂದ ನಡೆಯಿತು.


ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಶ್ರೀಮತಿ ಚಂದ್ರಕಲಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು ಪ್ರಾರಂಭೋತ್ಸವದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿ ಬರಮಾಡಿಕೊಂಡರು.

ಕಾರ್ಯಕ್ರಮದ ವೇದಿಕೆಯಲ್ಲಿ ವಾರ್ಡ್ ಸದಸ್ಯೆ ಶ್ರೀಮತಿ ಮಮತಾ ಕುತ್ಪಾಜೆ,ಉಪನ್ಯಾಸಕರಾದ ಮಧುಸೂದನ್ ಬೇರ್ಪಡ್ಕ,ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಶೀಲಾ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದಲ್ಲಿ ಮಧುಸೂದನ್ ರವರು ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಅದರ ಪ್ರಾಮುಖ್ಯತೆಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಯುವಕ,ಯುವತಿ ಮಂಡಲದ ಸದಸ್ಯರು,ಎಸ್ ಡಿ ಎಂ ಸಿ ಸದಸ್ಯರು,ಪೋಷಕ ವೃಂದದವರು,ಹಳೇವಿದ್ಯಾರ್ಥಿ ಸಂಘದ ಸದಸ್ಯರು, ಅಂಗನವಾಡಿ ಸಹಾಯಕಿ,ಅಕ್ಷರ ದಾಸೋಹ ಸಿಬ್ಬಂದಿ, ಶಾಲಾ ಪ್ರೋತ್ಸಾಹಕರು ಭಾಗವಹಿಸಿದ್ದರು. ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಪುರುಷೋತ್ತಮ ಅಮೈ ಸಿಹಿತಿಂಡಿ ನೀಡಿ ಸಹಕರಿಸಿದರು.ಕೀರ್ತನ್ ಕ್ಯಾಟ್ರಿಂಗ್ಸ್ ಮಾಲಕ ಹರಿಪ್ರಸಾದ್ ಜಯನಗರ ವಿದ್ಯಾರ್ಥಿಗಳಿಗೆ ಬ್ಯಾಗ್,ಪುಸ್ತಕ,ಲೇಖನ ಸಾಮಗ್ರಿ ಮತ್ತು ಸಿಹಿತಿಂಡಿ ನೀಡಿ ಸಹಕರಿಸಿದರು
ವಾರ್ಡ್ ಸದಸ್ಯೆ ಶ್ರೀಮತಿ ಮಮತಾ ಕುತ್ಪಾಜೆ ಸಿಹಿ ಪದಾರ್ಥ ನೀಡಿ ಸಹಕರಿಸಿದರು.ಶಿಕ್ಷಕಿ ಸವಿತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.