ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆ ಜಾಲ್ಸೂರು : ಪ್ರಾರಂಭೋತ್ಸವ

0

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಜಾಲ್ಸೂರು ಇಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.

ಒಂದನೇ ತರಗತಿಗೆ ಸೇರಿದ ಮಕ್ಕಳಿಗೆ ಹೂ ನೀಡಿ ಸ್ವಾಗತಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ಎಸ್.ಡಿ.ಎಂ.ಸಿ.‌ಅಧ್ಯಕ್ಷ ಮಹಮ್ಮದ್ ನೌಫಲ್ ವಹಿಸಿದ್ದರು.
ಶಾಲಾ ಮುಖ್ಯ ಶಿಕ್ಷಕಿ ವಸಂತಿ ಎಂ, ಎಸ್.ಡಿ.ಎಂ.ಸಿ.‌ ಸದಸ್ಯರು ವೇದಿಕೆಯಲ್ಲಿದ್ದರು.
ಮುಖ್ಯ ಶಿಕ್ಷಕರು ಪ್ರಾಸ್ತಾವಿಕ ‌ಮಾತನಾಡಿ, ಇಲಾಖಾ ಸೌಲಭ್ಯಗಳ ಮಾಹಿತಿ ನೀಡಿದರು.


ಇದೇ ಸಂದರ್ಭದಲ್ಲಿ ಸಮವಸ್ತ್ರ ಹಾಗೂ ಪಠ್ಯ ಪುಸ್ತಕ ವಿತರಣೆ ವಿತರಿಸಲಾಯಿತು.

ಸಹಶಿಕ್ಷಕಿ ದಿವ್ಯಾ ಬಿ‌ ವಂದಿಸಿದರು. ಶಿಕ್ಷಕಿಯರಾದ ಚಂದ್ರಾವತಿ‌ ವೈ.ಬಿ., ಕಾವ್ಯಶ್ರೀ ಸಹಕರಿಸಿದರು. ಶಿಕ್ಷಕಿ ಪೂರ್ಣಿಮಾ ಎಂ.ಎಂ. ಕಾರ್ಯಕ್ರಮ ನಿರೂಪಿಸಿದರು.