ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆಯಲ್ಲಿ ಪ್ರಾರಂಭೋತ್ಸವ

0

ಸುಳ್ಯದ ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆಯಲ್ಲಿ ಮೇ. ೩೧ರಂದು ಎಲ್ಲಾ ವಿದ್ಯಾರ್ಥಿಗಳನ್ನು ಬ್ಯಾಂಡ್ ವಾದ್ಯಗಳ ಮೂಲಕ ಮೆರವಣಿಗೆಯಲ್ಲಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ನಂತರ ಸಭಾ ಕಾರ್‍ಯಕ್ರಮ ನಡೆಸಲಾಯಿತು.


ವೇದಿಕೆಯಲ್ಲಿ ದಕ್ಷಿಣಕನ್ನಡ ಗೌಡ ವಿದ್ಯಾ ಸಂಘದ ನಿರ್ದೇಶಕರು, ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀಮತಿ ತಂಗಮ್ಮ ಕೆ.ಎಸ್ , ಪದವಿ ಪೂರ್ವ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ ಕೆ, ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಭಾರತಿ ಪಿ ಇವರು ವಿದ್ಯಾರ್ಥಿಗಳಿಗೆ ಶಾಲಾ ನಿಯಮಗಳನ್ನು, ಶಿಕ್ಷಣದ ಮೌಲ್ಯಗಳನ್ನು ತಿಳಿಸಿದರು. ಕು.ಜಾಹ್ನವಿ ಮತ್ತು ತಂಡದವರು ಪ್ರಾರ್ಥಿಸಿದರು.

ಕನ್ನಡ ಶಿಕ್ಷಕಿ ಶ್ರೀಮತಿ ಗಾಯತ್ರಿ ಸಿ.ಎನ್. ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಪ್ರಭಾವತಿ ಎಸ್. ಕಾರ್ಯಕ್ರಮ ನಿರೂಪಿಸಿದರು.