ಸುರತ್ಕಲ್ ಚಿರಂತನ ವೃದ್ದಾಶ್ರಮದ ಮ್ಯಾನೆಜರ್ ಕೆ.ಜಿ. ಮುರಲೀಧರ ನಿಧನ

0


ಸುರತ್ಕಲ್ ನ ಚಿರಂತನ ವೃದ್ದಾಶ್ರಮದಲ್ಲಿ ಮ್ಯಾನೆಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮುಪ್ಪೇರ್ಯ ಗ್ರಾಮದ ಗಣಪಯ್ಯ ಕಾಯಾರರ ಪುತ್ರ ಕೆ.ಜಿ ಮುರಲೀಧರ (೫೨) ಮೇ ೨೭ರಂದು ಹೃದಯಾಘಾತದಿಂದ ನಿಧನರಾದರು. ಮೃತರು ತಂದೆ, ತಾಯಿ, ಪತ್ನಿ, ಪುತ್ರ, ಸಹೋದರಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ. ಇವರು ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ, ಸುರತ್ಕಲ್ ಗೋವಿಂದದಾಸ ಪದವಿ ಪೂರ್ವ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. ಸಂಗೀತ, ಸಾಹಿತ್ಯ ಕಾರ್ಯಕ್ರಮಗಳ ನಿರೂಪಕರಾಗಿ ತೊಡಗಿಸಿಕೊಂಡಿದ್ದರು.