ಅರಂತೋಡು : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಪ್ರಾರಂಭೋತ್ಸವ

0


ಅರಂತೋಡು ನೆಹರು ಸ್ಮಾರಕ ಪ್ರೌಢಶಾಲೆಯ ಮಕ್ಕಳನ್ನು ಶಾಲಾ ಸಂಚಾಲಕರು, ಮುಖ್ಯ ಶಿಕ್ಷಕರು ಹಾಗೂ ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳನ್ನು ಬ್ಯಾಂಡ್ ವಾದ್ಯ ಘೋಷಣೆ ಗಳೊಂದಿಗೆ ಹೂವು ನೀಡಿ ಸ್ವಾಗತಿಸಲಾಯಿತು.

ಶಾಲೆಯ ಮುಖ್ಯ ದ್ವಾರವನ್ನು ತೋರಣಗಳಿಂದ ಅಲಂಕರಿಸಲಾಗಿತ್ತು. ನೂತನವಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳ ಪೋಷಕರ ಸಭೆ ಆಯೋಜಿಸಲಾಗಿತ್ತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಶ್ರೀಮತಿ ಹರಿಣಿ ದೇರಾಜೆ ವಹಿಸಿದ್ದರು. ಸಭೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಶಾಲಾ ಸಂಚಾಲಕರಾದ ಕೆ ಆರ್ ಗಂಗಾಧರ್ ರವರು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಪ್ರೇರಣಾಧಾಯಕ ಮಾರ್ಗದರ್ಶನ ನೀಡಿದರು .

ಮುಖ್ಯ ಶಿಕ್ಷಕರಾದ ಎಂ ಕೆ ಸೀತಾರಾಮ್ ಗುಣಾತ್ಮಕ ಶಿಕ್ಷಣದ ಶೈಕ್ಷಣಿಕ ವರ್ಷದ ಕುರಿತು ಮಾಹಿತಿ ನೀಡಿದರು. ಆರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು. ಶಿಕ್ಷಕಿ ಶ್ರೀಲತಾ ಸ್ವಾಗತಿಸಿ, ಮಮತ ಎನ್. ರವರು ವಂದನೆ ಸಲ್ಲಿಸಿದರು. ಅಧ್ಯಾಪಕ ಕಿಶೋರ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಮಕ್ಕಳಿಗೆ ಸಿಹಿ ತಿನ್ನಿಸಿ ಸಂಭ್ರಮ ಆಚರಿಸಲಾಯಿತು.