ಗೂನಡ್ಕ : ಶ್ರೀ ಶಾರದಾ ಅನುದಾನಿತ ಶಾಲೆಯ ಪ್ರಾರಂಭೋತ್ಸವ

0


ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗೂನಡ್ಕ ೨೦೨೩ – ೨೪ರ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮವು ಮೇ. ೩೧ರಂದು ನಡೆಯಿತು.
ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರು ಸದಸ್ಯರುಗಳು ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರು/ ಉಪಾಧ್ಯಕ್ಷರು ಸರ್ವ ಸದಸ್ಯರುಗಳು ಉಪಸ್ಥಿತರಿದ್ದು ಹೊಸದಾಗಿ ಒಂದನೇ ತರಗತಿಗೆ ದಾಖಲಾದ ಮಕ್ಕಳನ್ನು ಗುಚ್ಛ ನೀಡುವುದರ ಮೂಲಕ ಸ್ವಾಗತಿಸಿಕೊಂಡರು, ನಂತರ ಹೊಸದಾಗಿ ಒಂದನೇ ತರಗತಿಯ ದಾಖಲಾದ ಮಕ್ಕಳಿಂದಲೇ ದೀಪ ಬೆಳಗಿಸುವ ಮುಖಾಂತರ ಸಭಾ ಕಾರ್ಯಕ್ರಮಕ್ಕೆ ಶಾಲೆಯನ್ನು ಚಾಲನೆಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ಪೋಷಕರು ವಿದ್ಯಾ ಅಭಿಮಾನಿಗಳು ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಾರಂಭೋತ್ಸವದ ಕಾರ್ಯಕ್ರಮದ ದಿನ ಶಾಲಾ ವಿದ್ಯಾರ್ಥಿಗಳಿಗೆ ಯು. ಬಿ. ಚಕ್ರಪಾಣ, ಶಾಲಾ ಆಡಳಿತ ಮಂಡಳಿಯ ನಿರ್ದೇಶಕರು ಪಾಯಸದ ವ್ಯವಸ್ಥೆಯನ್ನು ಮಾಡಿದರು.