ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ನೇಮಕ

0

ಸಂಪುಟ ದರ್ಜೆ ಸಚಿವರ ಸ್ಥಾನಮಾನ

ಪೆರಾಜೆ, ಕೊಡಗು ಸಂಪಾಜೆ, ಚೆಂಬು ಗ್ರಾಮಗಳನ್ನೊಳಗೊಂಡ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕಾನೂನು ಸಲಹೆಗಾರರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ಈ ಪದವಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಲಾಗಿದೆ.

ಖ್ಯಾತ ವಕೀಲರೂ ಆಗಿರುವ ಪೊನ್ನಣ್ಣ ಅವರು ಹಿರಿಯ ರಾಜಕಾರಣಿ ಹಾಗೂ ವಕೀಲರಾಗಿದ್ದ ಎ.ಕೆ.ಸುಬ್ಬಯ್ಯ ಅವರ ಪುತ್ರ. ಪೊನ್ನಣ್ಣ ಸಿದ್ಧರಾಮಯ್ಯ ಸಂಪುಟದಲ್ಲಿ ಸಚಿವ ಪದವಿ ಆಕಾಂಕ್ಷಿಯಾಗಿದ್ದರು.