ಕಡಬ : ಬಸ್ ಗೆ ದಂತದಿಂದ ತಿವಿದ ಕಾಡಾನೆ – ಬಸ್ ಗೆ ಹಾನಿ – ಪ್ರಯಾಣಿಕರು ಅಪಾಯದಿಂದ ಪಾರು

0

ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಗೆ ಕಾಡಾನೆಯೊಂದು ದಂತದಿಂದ ತಿವಿದ ಹಿನ್ನೆಲೆಯಲ್ಲಿ ಬಸ್ ಗೆ ಹಾನಿಯಾದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ಜೂ.1 ರಂದು ರಾತ್ರಿ ನಡೆದಿದೆ.
ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕ ಅನಿಲ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಾಡಾನೆಯನ್ನು ಕಂಡು ತಪ್ಪಿಸಲು ಯತ್ನಿಸಿದರಾದರೂ, ಆನೆಯು ಬಸ್ಸಿನ ಎಡಭಾಗಕ್ಕೆ ದಂತದಿಂದ ತಿವಿದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಬಸ್ಸಿಗೆ ಹಾನಿಯಾಗಿದೆ.
ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆಂದು ತಿಳಿದು ಬಂದಿದೆ.