ಸುಬ್ರಹ್ಮಣ್ಯದಲ್ಲಿ ಕಾರು ಹರಿದು ಗಾಯಗೊಂಡು ಆಸ್ಪತ್ರೆಯಲ್ಲಿರುವ ವಿದ್ಯಾರ್ಥಿಗಳ ಯೋಗ ಕ್ಷೇಮ ವಿಚಾರಿಸಿದ ಶಾಸಕಿ

0

ಶ್ರೀ ಸುಬ್ರಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಸುಬ್ರಹ್ಮಣ್ಯದಲ್ಲಿ ಕಾರು ಹರಿದು ಮೂರು ಜನ ವಿದ್ಯಾರ್ಥಿನಿಯರು ಗಾಯಗೊಂಡು ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ವಿದ್ಯಾರ್ಥಿನಿಯರನ್ನು ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಉತ್ತಮ ಚಿಕಿತ್ಸೆ ನೀಡುವ ಬಗ್ಗೆ ವೈದ್ಯರಿಗೆ ತಿಳಿಸಿದರು. ಅಜಾಗ್ರತೆಯಿಂದ ಕಾರು ಚಲಾಯಿಸಿದ ಚಾಲಕನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರವರಿಗೆ ಶಾಸಕರು ಸೂಚಿಸಿದರು.