ಪಂಜ: ಪಿ.ಯು. ಕಾಲೇಜು ನೂತನ ಕೊಠಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆ

0

ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕೊಠಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮ ಜೂ.2ರಂದು ಜರುಗಿತು.


ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕೊಠಡಿ ನಿರ್ಮಾಣಕ್ಕೆ ಹಿಂದಿನ ರಾಜ್ಯ ಸರ್ಕಾರದ ವಿವೇಕ ಯೋಜನೆಯಡಿಯಲ್ಲಿ ಸುಮಾರು ಅಂದಾಜು 23 ಲಕ್ಷ ರೂಪಾಯಿ ಮಂಜೂರು ಗೊಂಡಿದ್ದು ಕಾಮಗಾರಿಗೆ ಗುದ್ದಲಿ ಪೂಜೆಯನ್ನು
ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ ನೆರವೇರಿಸಿದರು.

ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಚೀನಪ್ಪ ಕಾಣಿಕೆ ,ಪಂಜ ಗ್ರಾಮ ಪಂಚಾಯತ್ ಸದಸ್ಯರಾದ ನಾರಾಯಣ ಕೃಷ್ಣನಗರ, ಲಿಖಿತ್ ಪಲ್ಲೋಡಿ, ಚಂದ್ರಶೇಖರ ದೇರಾಜೆ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಸದಾನಂದ ತೋಟ,ಹೈಸ್ಕೂಲ್ ಮುಖ್ಯೋಪಾಧ್ಯಾಯ ಟೈಟಸ್ ವರ್ಗೀಸ್, ಕಾಮಗಾರಿ ಗುತ್ತಿಗೆದಾರ ಅಬ್ದುಲ್ ಖಾದರ್, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ವೆಂಕಪ್ಪ ಕೇನಾಜೆ ಸ್ವಾಗತಿಸಿದರು ಮತ್ತು ವಂದಿಸಿದರು.