ಪ್ರಸ್ತುತ ವಿದ್ಯಮಾನದಲ್ಲಿ ಕಂಪನಿ ಸೆಕ್ರೆಟರಿ ಅಧ್ಯಯನದ ಮಾಹಿತಿ: ಕೆಎಸ್ಎಸ್ ಕಾಲೇಜಿನಲ್ಲಿ ಕಾರ್ಯಕ್ರಮ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ
ಇಲ್ಲಿನ ವಾಣಿಜ್ಯ ಹಾಗೂ ಉದ್ಯಮಾಡಳಿತ ವಿಭಾಗ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದಲ್ಲಿ ಅಂತಿಮ ಪದವಿಯ ವಾಣಿಜ್ಯ ಹಾಗು ಉದ್ಯಮಾಡಳಿತ ವಿದ್ಯಾರ್ಥಿಗಳಿಗೆ ಪ್ರಸ್ತುತ ವಿದ್ಯಮಾನದಲ್ಲಿ ಕಂಪನಿ ಸೆಕ್ರೆಟರಿ ಅಧ್ಯಯನದ ಮಾಹಿತಿ ಕಾರ್ಯಕ್ರಮ ನಡೆಯಿತು.

ಮಾಹಿತಿ ನೀಡಿದ ರೇಣುಪ್ರಸಾದ್ ರವರು ಅಧ್ಯಯನದ ಬಗ್ಗೆ, ಅದರ ತರಬೇತಿ ಮತ್ತು ಪರೀಕ್ಷೆಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ದಿನೇಶ್ ಪಿ.ಟಿ. , ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಲತಾ ಬಿ.ಟಿ. , ವಾಣಿಜ್ಯ ಉಪನ್ಯಾಸಕರಾದ ಶ್ರೀಮತಿ ಪುಷ್ಪ. ಡಿ. ಹಾಗೂ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿ ಸಂಘದ ಸಂಯೋಜಕರಾದ ತೇಜಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಅಂತಿಮ ಪದವಿಯ ವಿದ್ಯಾರ್ಥಿಗಳಾದ ಶ್ರಾವ್ಯ ಸ್ವಾಗತಿಸಿ, ಹರ್ಷಿತ್ ವಂದಿಸಿದರು . ಸಿಂಧೂರ ಬಿಬಿಎ ಕಾರ್ಯಕ್ರಮ ನಿರೂಪಿಸಿದರು.