ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಉದ್ಯೋಗ ಮಾರ್ಗದರ್ಶನ

0

ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ ಎಲ್‌ಎಲ್.ಬಿ ನಂತರದ ಅವಕಾಶಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ಜೂ.೦೨ ರಂದು ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಸರ್ವಜ್ಞ ಅಕಾಡೆಮಿಯ ನಿರ್ದೇಶಕರಾದ ಸುರೇಶ್ ಎಮ್.ಎಸ್. ರವರು ಮಾತನಾಡಿ ಕಾನೂನು ಪದವಿ ನಂತರದ ಉದ್ಯೋಗಾವಕಾಶಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ಒದಗಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಉದಯಕೃಷ್ಣ. ಬಿ ವಹಿಸಿದ್ದರು. ವೇದಿಕೆಯಲ್ಲಿ ಹಿರಿಯ ಉಪನ್ಯಾಸಕ ಜಯರಾಮ್ ವೈ. ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಅಂಜಲಿ ಮತ್ತು ಕವನ ಪ್ರಾರ್ಥಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಿಲನ್ ಬಿ.ಕೆ. ಸ್ವಾಗತಿಸಿ, ಲತಾಕುಮಾರಿ ಕೆ.ಡಿ ವಂದಿಸಿದರು. ನಿಶಾ ರೆಬೆಲ್ಲೊ ಕಾರ್ಯಕ್ರಮ ನಿರೂಪಿಸಿದರು.