ಸುಬ್ರಹ್ಮಣ್ಯ: ಕಾರು ಹರಿದು ವಿದ್ಯಾರ್ಥಿನಿಯರು ಗಾಯಗೊಂಡ ಪ್ರಕರಣ

0

ಗಾಯಾಳುಗಳನ್ನು ಭೇಟಿ ಮಾಡಿದ ಸುಬ್ರಹ್ಮಣ್ಯ ದೇಗುಲದ ಕಾರ್ಯ ನಿರ್ವಹಣಾಧಿಕಾರಿ ಡಾ.ನಿಂಗಯ್ಯ

ಕಾಲೇಜು ಮುಗಿಸಿ ಮನೆಗೆ ತೆರಳುವ ಸಂದರ್ಭ ಮುಖ್ಯ ರಸ್ತೆಯಲ್ಲಿ ವಿದ್ಯಾರ್ಥಿನಿಯರ ಮೇಲೆ ಏಕಾಏಕಿ ಕಾರೊಂದು ಹರಿದು ಮೂವರು ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡ ಘಟನೆ ನಿನ್ನೆ ಸಂಜೆ ವೇಳೆ ಸುಬ್ರಹ್ಮಣ್ಯದಲ್ಲಿ ನಡೆದಿದ್ದು, ಗಾಯಗೊಂಡ ವಿದ್ಯಾರ್ಥಿಗಳು ಸುಳ್ಯ ಹಾಗೂ ಪುತ್ತೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಕುಕ್ಕೆ ದೇವಳದ ಕಾರ್ಯ ನಿರ್ವಹಣಾಧಿಕಾರಿ ಡಾ.ನಿಂಗಯ್ಯ, ದೇವಳದ ಅಭಿಯಂತರ ಉದಯ ಕುಮಾರ್ ಹಾಗೂ ದೇವಳದ ಸಿಬ್ಬಂದಿಗಳು ಯೋಗಕ್ಷೇಮ ವಿಚಾರಿಸಿ ಧೈರ್ಯ ತುಂಬಿದರು.