ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಆಸನದ ಕೊರತೆ ಸರಿಮಾಡುವಂತೆ ಎನ್.ಎಸ್.ಯು.ಐ ಮನವಿ

0


ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಕುಳಿತುಕೊಳ್ಳುವ ಆಸನಗಳ ಕೊರತೆ ಇದ್ದು ಸರಿಮಾಡಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ತಾಲೂಕು ಎನ್.ಎಸ್.ಯು.ಐ.ಘಟಕ ಮನವಿ ಮಾಡಿದೆ.
ಕಳೆದ ಹಲವಾರು ತಿಂಗಳುಗಳಿಂದ ಪ್ರಯಾಣಿಕರು ಕುಳಿತುಕೊಳ್ಳವ ಆಸನಗಳ ಸಂಖ್ಯೆ ಕಡಿಮೆಯಾಗುತ್ತಾ ಬಂದಿದ್ದು, ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತಿದೆ.ತಮ್ಮ ಬಳಿ ಇರುವ ಲಗೇಜು ಮತ್ತು ಸಣ್ಣ ಪುಟ್ಟ ಮಕ್ಕಳನ್ನು ಗಂಟೆ ಗಟ್ಟಲೆ ನಿಲ್ಲಿಸಿ ಬಸ್ಸನ್ನು ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಾತ್ರವಲ್ಲದೆ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಇದನ್ನು ಗಮನ ಹರಿಸಿದ ಎನ್ ಎಸ್ ಯು ಐ ವಿದ್ಯಾರ್ಥಿ ಸಂಘಟನೆ ಬಸ್ ನಿಲ್ದಾಣದಲ್ಲಿ ಕುಳಿತುಕೊಳ್ಳಲು ಆಸನಗಳ ಸಂಖ್ಯೆಯನ್ನು ಹೆಚ್ಚಿಸುವ ಹಾಗೂ ಸರಿಪಡಿಸಿವ ವ್ಯವಸ್ಥೆಯನ್ನು ಕೂಡಲೇ ಮಾಡಬೇಕೆಂದು ಡಿಪ್ಪೋ ಮೇನೇಜರ್ ರವರಿಗೆ ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಎನ್ ಎಸ್ ಯು ಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ, ಪ್ರಧಾನ ಕಾರ್ಯದರ್ಶಿ ಶಹಾಲ್ ಕೆ.ಎಸ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here