ರೋಟರಿ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ವರ್ಗವರಿಗೆ ಅಭಿನoದನಾ ಸಮಾರಂಭ

0

3 ರಂದು ರೋಟರಿ ವಿದ್ಯಾಸಂಸ್ಥೆಯಲ್ಲಿ ಎಸ್. ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ. ಯು.ಸಿ ಯಲ್ಲಿ ಶೇಕಡಾ ನೂರು ಫಲಿತಾಂಶ ಪಡೆಯಲು ಕಾರಣರಾದ ಎಲ್ಲಾ ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿ ವರ್ಗದವರನ್ನು ಗೌರವಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಸುಳ್ಯದ ಅಧ್ಯಕ್ಷರಾದ ರೊ.ಚಂದ್ರಶೇಖರ್ ಪೇರಾಲ್ ವಹಿಸಿದ್ದರು.

ವಿದ್ಯಾ ಸಂಸ್ಥೆಯ ಸಂಚಾಲಕರಾದ ರೊ.ಗಿರಿಜಾಶಂಕರ್ ತುದಿಯಡ್ಕ , ಆಡಳಿತ ಮಂಡಳಿ ಸದ್ಯರಾದ ರೊ.ದಯಾನಂದ ಆಳ್ವ ಎಲ್ಲಾ ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿದರು.

ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವೀಣಾ ಶೇಡಿಕಜೆ ಸ್ವಾಗತಿಸಿ , ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಶೋಭಾ ಬೊಮ್ಮೆಟ್ಟಿ ವಂದಿಸಿದರು.