ಗುತ್ತಿಗಾರು : ಆರೋಗ್ಯ ಮತ್ತು ಸ್ವಾಸ್ಥ್ಯದ ಪ್ರಚಾರ ಹಾಗೂ ಯೋಗ ಕಾರ್ಯಕ್ರಮ

0

ಭಾರತ ಸರ್ಕಾರ, ಯುವ ಕಾರ್ಯ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವಜನ ಸಂಯುಕ್ತ ಮಂಡಳಿ ಸುಳ್ಯ, ಸರಕಾರಿ ಪದವಿ ಪೂರ್ವ ವಿದ್ಯಾಲಯ ಗುತ್ತಿಗಾರು ಇದರ ಆಶಯದಲ್ಲಿ ಆದರ್ಶ ಯೂತ್ ಕ್ಲಬ್, ವೀರ ಮಾರುತಿ ಸ್ಪೋರ್ಟ್ಸ್ ಕ್ಲಬ್ ಸಹಯೋಗದಲ್ಲಿ ಪರಿಸರಕ್ಕಾಗಿ ಜೀವನ ಶೈಲಿ ಕಾರ್ಯಕ್ರಮದಡಿ ಆರೋಗ್ಯ ಮತ್ತು ಸ್ವಾಸ್ಥ್ಯದ ಪ್ರಚಾರ ಹಾಗೂ ಯೋಗ ಕಾರ್ಯಕ್ರಮ ಜೂ.5ರಂದು ಗುತ್ತಿಗಾರು ಸರಕಾರಿ ಪದವಿ ಪೂರ್ವ ವಿದ್ಯಾಲಯದಲ್ಲಿ ನಡೆಯಿತು.


ಕಾಲೇಜಿನ ಉಪನ್ಯಾಸಕಿ ಜಕೀನ ಡಿಸೋಜಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಯೋಗೇನ ಚಿತ್ತಸ್ಯ ಯೋಗ ಕೇಂದ್ರದ ಯೋಗ ಶಿಕ್ಷಕ ಸಂತೋಷ್ ಮುಂಡಕಜೆ ಭಾಗವಹಿಸಿದ್ದರು.


ವೇದಿಕೆಯಲ್ಲಿ ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ ತೇಜಸ್ವಿ ಕಡಪಲ, ಆದರ್ಶ ಯೂತ್ ಕ್ಲಬ್ ಅಧ್ಯಕ್ಷ ಸತೀಶ್ ಬಂಬುಳಿ, ವೀರ ಮಾರುತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಮಾಧವ ಎರ್ದ್ದಡ್ಕ ಉಪಸ್ಥಿತರಿದ್ದರು.


ಕಾಲೇಜಿನ ಮಕ್ಕಳು ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಯುವಜನ ಸಂಯುಕ್ತ ಮಂಡಳಿ ನಿರ್ದೇಶಕ ದಿನೇಶ್ ಹಾಲೆಮಜಲು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.