ಅರಂತೋಡು: ಕಾಲೇಜಿನ ಪಿಯುಸಿ ತರಗತಿಗಳ ಪ್ರಾರಂಭೋತ್ಸವ

0

ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜ್ ಅರಂತೋಡು ಇದರ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ನಡೆಯಿತು. ಕಾಲೇಜಿನ ಪ್ರಾಂಶುಪಾಲರು ದೀಪ ಬೆಳಗಿಸಿ 2023-24 ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ ನೀಡಿ, ಕಾಲೇಜಿನ ನೀತಿ ನಿಯಮಗಳು ಮತ್ತು ವಿದ್ಯಾರ್ಥಿಗಳ ಜವಾಬ್ದಾರಿಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಜೀವಶಾಸ್ತ್ರ ಉಪನ್ಯಾಸಕ ಶ್ರೀ ಗೌರಿಶಂಕರ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಶುಭ ಹಾರೈಸಿದರು.ಕನ್ನಡ ಉಪನ್ಯಾಸಕಿ ಶ್ರೀಮತಿ ಕುಸುಮಾವತಿ ವಂದಿಸಿದರು.ಇತಿಹಾಸ ಉಪನ್ಯಾಸಕ ಮೋಹನ್ ಚಂದ್ರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.