ಸುಳ್ಯ ಎಂ.ಜಿ.ಎಂ. : ವಿಶ್ವ ಪರಿಸರ‌ ದಿನ

0

ಸುಳ್ಯ‌ ಕೊಡಿಯಾಲಬೈಲಿನ ಮಹಾತ್ಮ ಗಾಂಧಿ ಮಲ್ನಾಡು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.


ಶಾಲಾ ಸಂಚಾಲಕರಾದ ದೊಡ್ಡಣ್ಣ ಬರೆಮೇಲು ರವರು ವಿಶ್ವ ಪರಿಸರ ದಿನಾಚರಣೆ ಮಹತ್ವವನ್ನು ಮಕ್ಕಳಿಗೆ ತಿಳಿಸಿ ಹಣ್ಣಿನ ಗಿಡ ನೆಡುವುದರ ಮೂಲಕ ಈ ದಿನ ವಿಶ್ವ ಪರಿಸರ ದಿನಾಚರಣೆಯನ್ನು ಶಾಲೆಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರು ಅಧ್ಯಾಪಕ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.