ಎಲಿಮಲೆ ಜ್ಞಾನದೀಪ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ‌ ದಿನ ಆಚರಣೆ

0

ಎಲಿಮಲೆ ಜ್ಞಾನದೀಪ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ‌ ದಿನಾಚರಣೆಯನ್ನು ಆಚರಿಸಲಾಯಿತು.
ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ತಳೂರು ಚಂದ್ರಶೇಖರ್ ಭಟ್ ರವರು ವಿಶ್ವ ಪರಿಸರ ದಿನಾಚರಣೆ ಮಹತ್ವವನ್ನು ಮಕ್ಕಳಿಗೆ ತಿಳಿಸಿ ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಶಾಲೆಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕ ಗದಾಧರ್ ಬಾಳುಗೋಡು, ಅಧ್ಯಾಪಕ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.