ನಿಂತಿಕಲ್ಲು ಪರಿವಾರ ಪಂಚಲಿಂಗೇಶ್ವರ ಐಟಿಐಯಲ್ಲಿ ವಿಶ್ವ ಪರಿಸರ ದಿನಾಚರಣೆ

0


ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಕೇಂದ್ರದ ವತಿಯಿಂದ ಇಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಪರಿಸರದ ಬಗ್ಗೆ ಕಾಳಜಿ ಹಾಗೂ ಅರಿವು ಮೂಡಿಸುವ ಬಗ್ಗೆ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿಯಾದ ಶ್ರೀಮತಿ ರೂಪ ಪಿ.ಜೆ ಯವರು ಪ್ರಸ್ತಾವಿಕ ಮಾತನಾಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ಅಧ್ಯಾಪಕ ಹಾಗೂ ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಎನ್.ಎಸ್.ಎಸ್ ಸಹಾಯಕ ಕಾರ್ಯಕ್ರಮ ಅಧಿಕಾರಿಯಾದ ಪ್ರಜ್ವಲ್ ನೆರವೇರಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ವಠಾರದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡಲಾಯಿತು.