ಸೈಂಟ್ ಜೋಸೆಫ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಸುಳ್ಯದ ಸೈಂಟ್ ಜೋಸೆಫ್ ಆಂಗ್ಲಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ.05 ರಂದು ಆಚರಿಸಲಾಯಿತು. 6ನೇ ತರಗತಿ ವಿದ್ಯಾರ್ಥಿಗಳಿಂದ ಪರಿಸರ ಜಾಗೃತಿಯ ಬಗ್ಗೆ ನೃತ್ಯ, ಹಾಡು ಹಾಗೂ ಭಾಷಣವನ್ನು ಹಮ್ಮಿಕೊಳ್ಳಲಾಯಿತು.

ಶಾಲಾ ಸಂಚಾಲಕರಾದ ರೆ. ಫಾ. ವಿಕ್ಟರ್ ಡಿಸೋಜರವರು ಮಾತನಾಡಿ ಪರಿಸರದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿ. ಬಿನೋಮ ಮಾತನಾಡಿ ಮಕ್ಕಳಿಗೆ ಸ್ವಚ್ಛತೆ ಹಾಗೂ ಪ್ರತಿ ಮಗುವು ಒಂದೊಂದು ಗಿಡನೆಟ್ಟು ಫೋಷಿಸುವಂತೆ ಹೇಳಿದರು.

ಕಾರ್ಯಕ್ರಮದ ನಿರೂಪಣೆಯನ್ನು 6 ನೇ ತರಗತಿ ವಿದ್ಯಾರ್ಥಿಗಳಾದ ಶಯಾನ್ ಅಬ್ದುಲ್ಲ ಹಾಗೂ ಲಕ್ಷ್ಯಜಿತ್ ರೈ ನೆರವೇರಿಸಿದರು. ಶಿಕ್ಷಕಿಯರಾದ ಶ್ರೀಮತಿ ಚೈತ್ರ ಹಾಗೂ ವಿದ್ಯಾಶ್ರೀ ಸಹಕರಿಸಿದರು.