ದಬ್ಬಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದಬ್ಬಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಇಂದು ಸಸಿಗಳನ್ನು ವಿತರಿಸುವ ಕಾರ್ಯಕ್ರಮ ನಡೆಯಿತು.

ಸುಳ್ಯ ವೆಂಕಟರಮಣ ಸೊಸೈಟಿಯ ನಿರ್ದೇಶಕರಾದ ಪುಂಡರಿಕ ಅರಂಬೂರು ಹಾಗೂ ಅರಣ್ಯ ಅಧಿಕಾರಿ ಮಧು ಸುಧನ್ ಇಲಾಖೆ ವತಿಯಿಂದ ಸಸಿಗಳನ್ನು ಉಚಿತವಾಗಿ ವಿತರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಸುಜಾತ ಬಿ ಹಾಗೂ ಶಿಕ್ಷಕ ವೃಂದದವರು, ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸದಸ್ಯರು, ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯರು, ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.