ಐವರ್ನಾಡು ಗ್ರಾಮ ಪಂಚಾಯತ್ ಆರೋಗ್ಯ ತಪಾಸಣಾ ಶಿಬಿರ

0

ಪ್ರಧಾನಮಂತ್ರಿ ಜೀವನ್ ಜ್ಯೋತಿ,ಸುರಕ್ಷಾ ಭೀಮಾ ಯೋಜನೆಯ ನೋಂದಣಿ

ಐವರ್ನಾಡು ಗ್ರಾಮ ಪಂಚಾಯತ್ ಗ್ರಾಮ ವಿಕಾಸ ಸಭಾ ಭವನದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಅಮೃತ ಆರೋಗ್ಯ ಯೋಜನೆಯಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ತಪಾಸಣಾ ಶಿಬಿರ ಹಾಗೂ ಐವರ್ನಾಡು ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ಶಾಖೆಯಲ್ಲಿ ಖಾತೆ ಹೊಂದಿದವರಿಗೆ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯ ನೊಂದಣಿ ಶಿಬಿರವು ಜೂ.05 ರಂದು ನಡೆಯಿತು.


ಈ ಶಿಬಿರದಲ್ಲಿ NRLM ಸಂಘದ ಅಧ್ಯಕ್ಷರು,ಉಪಾಧ್ಯಕ್ಷರು,ಸದಸ್ಯರು ಎಂಬಿಕೆ,ಎಲ್ ಸಿ.ಆರ್ ಪಿ , ಕೃಷಿ ಸಖಿ, ಸಮುದಾಯ ಆರೋಗ್ಯ ಅಧಿಕಾರಿ, ಆಶಾ ಕಾರ್ಯಕರ್ತೆಯರು, ವಲಯ ಮೇಲ್ವಿಚಾರಕರು ಕೌಶಲ್ಯ ಸುಳ್ಯ,, ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರ ಸುಳ್ಯ ಹಾಗೂ ಪಂಚಾಯತ್ ಸದಸ್ಯರು, ಎಸ್.ಬಿ.ಐ ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಿಬ್ಬಂದಿ ವರ್ಗ, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಸ್ವಾಗತಿಸಿ,ವಂದಿಸಿದರು.