ಅರಂಬೂರು ಮೂಕಾಂಬಿಕಾ ಭಜನಾ ಮಂದಿರದಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜೆ

0

ಅರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ ವರ್ಷಂಪ್ರತಿ ಜರುಗುವ ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ ಪೂಜೆಯು ಜೂ.4 ರಂದು ಮಂದಿರದ ವಠಾರದಲ್ಲಿ ಜರುಗಿತು.
ಪೂರ್ವಾಹ್ನ ಅರ್ಚಕ ಅಭಿರಾಮ್ ಭಟ್ ರವರು ಪ್ರಾರ್ಥಿಸಿ ಪೂಜಾ ಕೈಂಕರ್ಯ ಪ್ರಾರಂಭಿಸಿದರು.


ಮಂದಿರದ ಅಧ್ಯಕ್ಷ ರತ್ನಾಕರ ರೈ ದಂಪತಿಯು ಪೂಜಾ ವಿಧಿ ವಿಧಾನದಲ್ಲಿ ತೊಡಗಿಸಿಕೊಂಡರು.
ಈ ಸಂದರ್ಭದಲ್ಲಿ ಮಂದಿರದ ಭಜಕರಿಂದ ಭಜನೆ ಮತ್ತು ಆಕರ್ಷಕ ಕುಣಿತ ಭಜನೆಯು ನಡೆಯಿತು.
ಮಧ್ಯಾಹ್ನ ಮಹಾಪೂಜೆಯಾಗಿ ಎಲ್ಲರಿಗೂ ಪ್ರಸಾದ ವಿತರಿಸಲಾಯಿತು. ಆಗಮಿಸಿದ ಎಲ್ಲಾ ಭಕ್ತಾದಿಗಳಿಗೆ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.


ಭಜನಾ ಮಂದಿರದ ಗೌರವಾಧ್ಯಕ್ಷ ಶ್ರೀಪತಿ ಭಟ್ ಮಜಿಗುಂಡಿ ಹಾಗೂ ಮಾಜಿ ಅಧ್ಯಕ್ಷರುಗಳು,
ಮಂದಿರದ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಸಹಕರಿಸಿದರು.
ಸ್ಥಳೀಯ ಭಕ್ತಾದಿಗಳು ಭಾಗವಹಿಸಿ ಪೂಜಾ ಸೇವೆಯಲ್ಲಿ ಪಾಲ್ಗೊಂಡರು.