ಸುಬ್ರಹ್ಮಣ್ಯ ಎಸ್‌ಎಸ್‌ಪಿ ಯು ಕಾಲೇಜಿನಲ್ಲಿ ಪರಿಸರ ದಿನಾಚರಣೆ

0

ಎಸ್‌ಎಸ್‌ಪಿಯು ಕಾಲೇಜು ಸುಬ್ರಹ್ಮಣ್ಯ, ಕಾಲೇಜಿನ ಎನ್‌ಎಸ್‌ಎಸ್ ಘಟಕ, ರೋವರ್ಸ್ ಮತ್ತು ರೇಂಜರ್ಸ್ ಘಟಕ ಮತ್ತು ರೆಡ್ ಕ್ರಾಸ್ ಯೂನಿಯನ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಇಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಸೋಮಶೇಖರ ನಾಯಕ್ ವಹಿಸಿದ್ದರು. ಆರಂಭದಲ್ಲಿ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಎಚ್.ಪಿ.ಅರಣ್ಯ ಇಲಾಖೆಯಿಂದ ಕೊಡಮಾಡುವ ಸಸಿಗಳನ್ನು ವಿದ್ಯಾರ್ಥಿಗಳಿಗೆ ಹಸ್ತಾಂತರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಬಳಿಕ ವಿವಿಧ ಜಾತಿಯ ೫೦ಕ್ಕೂ ಅಧಿಕ ಗಿಡಗಳನ್ನು ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳು ನೆಟ್ಟರು.ವಿದ್ಯಾರ್ಥಿಗಳು ತಾವು ನೆಟ್ಟ ಗಿಡವನ್ನು ಸ್ವತಾಃ ತಾವೇ ಪೋಷಿಸುವ ಪ್ರತಿಜ್ಞೆಯನ್ನು ಈ ಸಂದರ್ಭದಲ್ಲಿ ಪಡೆದರು.
ಈ ಸಂದರ್ಭ ಎನ್‌ಎಸ್‌ಎಸ್ ಯೋಜನಾಧಿಕಾರಿಗಳಾದ ಭವ್ಯಶ್ರೀ ಕುಲ್ಕುಂದ, ಸುಧಾ, ರೋವರ್ಸ್ ಮತ್ತು ರೇಂಜರ್ಸ್ ನಾಯಕರಾದ ಸವಿತಾ ಕೈಲಾಸ್, ಪ್ರವೀಣ್ ಎರ್ಮಾಯಿಲ್, ರೆಡ್‌ಕ್ರಾಸ್ ಘಟಕದ ಸಂಯೋಜಕಿ ಶೃತಿ, ಉಪನ್ಯಾಸಕರಾದ ಗಿರೀಶ್, ಮನೋಜ್ ಕುಮಾರ್ ಬಿ.ಎಸ್, ದೈಹಿಕ ಶಿಕ್ಷಣ ಉಪನ್ಯಾಸಕ ರಾಧಾಕೃಷ್ಣ ಚಿದ್ಗಲ್, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಲೋಕೇಶ್ ಬಿ.ಎನ್, ಕಾರ್ಯದರ್ಶಿ ರತ್ನಾಕರ ಎಸ್, ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.