ಬಳ್ಪ ಗ್ರಾ.ಪಂ. ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

0

ಬಳ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋಗಾಯನಕೆರೆ ಪರಿಸರದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ಸೂಂತಾರು, ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಬಿ. ನಾರಾಯಣ, ಕಾರ್ಯದರ್ಶಿ ರಘ ಎನ್.ಬಿ, ಸದಸ್ಯರುಗಳಾದ ಹರ್ಷಿತ್ ಕಾರ್ಜ, ಶ್ರೀಮತಿ ಶೈಲಜಾ ಎಣ್ಣೆಮಜಲು, ಪಂಚಾಯತ್ ಸಿಬ್ಬಂದಿಗಳಾದ ಸಂಜೀವ, ಮೋಹನ ಮತ್ತು ವಸಂತ ಜೆ. ಹಾಗೂ ಸಂಜೀವಿನಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.