ಕನಕಮಜಲಿನಲ್ಲಿ ವಿಶ್ವ ಪರಿಸರ ದಿನಾಚರಣೆ

0

ಕನಕಮಜಲು ಗ್ರಾಮ ಪಂಚಾಯತ್ ನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಜಲಸಂಜೀವಿನಿ ಕಾರ್ಯಕ್ರಮ ಹಾಗೂ ಜಲಶಕ್ತಿ ಅಭಿಯಾನದಡಿ ಅಂತರಾಷ್ಟ್ರೀಯ ಜೀವ ವೈವಿಧ್ಯತಾ ದಿನದ ಪ್ರಯುಕ್ತ ಪಂಚ ಅಭಿಯಾನಗಳ ಅನುಷ್ಠಾನದ ಅಂಗವಾಗಿ ವಿಶ್ವ ಪರಿಸರ ದಿನಾಚರಣೆಯನ್ನು (Mission life (Pledge) ಜೂನ್ 5ರಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎನ್. ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪರಿಸರ ಸಂರಕ್ಷಣೆ ಹಾಗೂ ವಿಶ್ವ ಪರಿಸರ ದಿನಾಚರಣೆಯ ಆಶಯದ ಬಗ್ಗೆ ಮಾತನಾಡಿದರು. ಕನಕಮಜಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಧರ್ ಕುತ್ಯಾಳ, ಗ್ರಾ.ಪಂ ಸದಸ್ಯರುಗಳಾದ ಇಬ್ರಾಹಿಂ ಕಾಸಿಂ, ರವಿಚಂದ್ರ ಕೆ, ಶಾರದಾ .ಯು, ಉಪವಲಯ ಅರಣ್ಯಾಧಿಕಾರಿಗಳಾದ ಆನಂದ್, ಮಂಜುಳಾ, ಸಾಮಾಜಿಕ ಅರಣ್ಯ ವಲಯ ಸುಳ್ಯ, ತಾ.ಪಂ ಸಹಾಯಕ ನಿರ್ದೇಶಕರು ಹಾಗೂ ಕನಕಮಜಲು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸರೋಜಿನಿ ಬಿ, ಕಾರ್ಯದರ್ಶಿಗಳಾದ ರಮೇಶ್ , ಶಾಲಾ ಮುಖ್ಯೋಪಾಧ್ಯಾಯರಾದ ಶೇಸಮ್ಮ ಎ, ಶಿಕ್ಷಕರು, ಶಾಲಾ ಎಸ್.ಡಿಎಂಸಿ ಅಧ್ಯಕ್ಷರಾದ ಹಮೀದ್ ಕೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕನಕಮಜಲು, ಆರೋಗ್ಯ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಪ್ರತಿಜ್ಞಾವಿಧಿ ಭೋದಿಸಲಾಯಿತು.

ವಿಶ್ವ ಪರಿಸರ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ಗಿಡಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕನಕಮಜಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ವಾಗತಿಸಿ, ಗ್ರಾ.ಪಂ ಕಾರ್ಯದರ್ಶಿ ವಂದಿಸಿದರು.