ಪ್ಲಾಟಿಂಗ್ ಸಮಸ್ಯೆ ಬಗೆಹರಿಸಿ – ಕಂದಾಯ ಸಚಿವರಿಗೆ ಸುಳ್ಯ ಕಾಂಗ್ರೆಸ್ ನಾಯಕರ ಮನವಿ

0

ಪ್ಲಾಟಿಂಗ್ ಸಮಸ್ಯೆಯನ್ನು ಬಗೆಹರಿಸುವಂತೆ ರಾಜ್ಯದ ಕಂದಾಯ ಸಚಿವ ಕೃಷ್ಣಬೈರೇಗೌಡರನ್ನು ಸುಳ್ಯದ ಕಾಂಗ್ರೆಸ್ ಪಕ್ಷದ ಮುಖಂಡರು ಭೇಟಿಮಾಡಿ ಮನವಿ ಸಲ್ಲಿಸಿದ್ದಾರೆ.


ಕಳೆದ ಹಲವಾರು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂಮಿಯ ಪೋಡಿ ದುರಸ್ಥಿ, ಪ್ಲಾಟಿಂಗ್ ಸಮಸ್ಯೆ ಯಿಂದಾಗಿ ರೈತರಿಗೆ ಮನೆ ಕಟ್ಟುವವರಿಗೆ ತುಂಬಾ ಸಮಸ್ಯೆ ಉಂಟಾಗಿದ್ದು ಅದನ್ನು ಪರಿಹರಿಸುವರೇ ಜಿಲ್ಲಾ ಮಟ್ಟದ ಕಂದಾಯ ಅದಾಲತ್ ಏರ್ಪಡಿಸಿ ದ. ಕ ಮತ್ತು ಉಡುಪಿ ಜಿಲ್ಲೆಗೆ ಪ್ರತ್ಯೇಕ ನೀತಿಯನ್ನು ರೂಪಿಸುವಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರಿಗೆ ಸುಳ್ಯದ ಕಾಂಗ್ರೆಸ್ ಮುಖಂಡರು ಮನವಿ ಸಲ್ಲಿಸಿದರು.


ಈ ಸಂದರ್ಭದಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ ಕೆಪಿಸಿಸಿ ಸಂಯೋಜಕ ಎಸ್. ಸಂಶುದ್ದೀನ್,ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಖಜಾಂಚಿ ಕೆ. ಬಿ. ಇಬ್ರಾಹಿಂ ಮೊದಲಾದವರು ಉಪಸ್ಥಿತರಿದ್ದರು