ಅರಂತೋಡು:ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

0

ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜ್ ಅರಂತೋಡು ಇದರ ಪ್ರಥಮ ಪಿಯುಸಿ ತರಗತಿಗಳ ಪೋಷಕರ ಸಭೆ ನಡೆಯಿತು.

ಕಾಲೇಜಿನ ಪ್ರಾಂಶುಪಾಲರಾದ ರಮೇಶ್ ಅಧ್ಯಕ್ಷತೆ ವಹಿಸಿ, 2023-24 ರ ಶೈಕ್ಷಣಿಕ ಚಟುವಟಿಕೆಗಳು, ಕಾಲೇಜಿನ ನೀತಿ ನಿಯಮಗಳು ಮತ್ತು ಪೋಷಕರ ಜವಾಬ್ದಾರಿಗಳ ಕುರಿತು ಮಾತನಾಡಿದರು.


ರಸಾಯನಶಾಸ್ತ್ರ ಉಪನ್ಯಾಸಕ ಲಿಂಗಪ್ಪ ವಿಜ್ಞಾನ ವಿಭಾಗದ ಮತ್ತು ಇತಿಹಾಸ ಉಪನ್ಯಾಸಕ ಮೋಹನ್ ಚಂದ್ರ ಕಲಾ ಮತ್ತು ವಾಣಿಜ್ಯ ವಿಭಾಗದ ಕುರಿತು ಪೋಷಕರಿಗೆ ಮಾಹಿತಿ ನೀಡಿದರು.

ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಿದ್ಯಾಶಾಲಿನಿ ವಂದಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಶ್ರೀ ಪದ್ಮಕುಮಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.