ಅಮರಮುಡ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರುಗಳಿಗೆ ಕ್ರತಜ್ಞತಾ ಸಭೆಯು ಜೂ. 3ರಂದು ಅಮರಮೂಡ್ನೂರು ಗ್ರಾಮ ಪಂಚಾಯಿತಿ ಸದಸ್ಯ ಅಶೋಕ್ ಚೂಂತಾರುರವರ ಮನೆಯಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಮ ವಹಿಸಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಂದರ್ಭದಲ್ಲಿ ನೀಡಿದ ಗ್ಯಾರಂಟಿಯನ್ನು ಅನುಷ್ಟಾನಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅರ್ಹರಿಗೆ ತಲುಪಿಸುವ ವ್ಯವಸ್ಥೆಗೆ ಶ್ರಮಿಸಬೇಕು ಎಂದು ತಿಳಿಸಿದರು.
















ಈ ಸಂದರ್ಭದಲ್ಲಿ ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ ಕೃಷ್ಣಪ್ಪ ರಾಮಕುಂಜ ರವರು ಮಾತನಾಡಿ ಚುನಾವಣಾ ಸಂದರ್ಭದಲ್ಲಿ ಸಹಕಾರಿಸಿದ ನಾಯಕರುಗಳಿಗೆ ಹಾಗೂ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ವೆಂಕಪ್ಪ ಗೌಡ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಜಯಪ್ರಕಾಶ್ ರೈ, ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ ಎಸ್ ಗಂಗಾಧರ, ಕಾರ್ಮಿಕ ಮುಖಂಡ ಚಂದ್ರಲಿಂಗಂ, ಕಾಂಗ್ರೆಸ್ ಸೇವಾದಳದ ಜಯಪ್ರಕಾಶ್ ನೆಕ್ರಪ್ಪಾಡಿ, ಎನ್ಎಸ್ ಯುಐ ಅಧ್ಯಕ್ಷ ಕೀರ್ತನ್ ಕೊಡಪಾಲ, ಗ್ರಾಮ ಸಮಿತಿ ಅಧ್ಯಕ್ಷರುಗಳಾದ ರಾಮಯ್ಯ ರೈ ಕಜೆಮೂಲೆ, ಹೂವಪ್ಪ ಗೌಡ ಆರ್ನೋಜಿ, ಗ್ರಾಮ ಪಂಚಾಯಿತಿ ಸದಸ್ಯರಾದ ವೆಂಕಟ್ರಮಣ ಇಟ್ಟಿಗುಂಡಿ, ಮೀನಾಕ್ಷಿ ಚೂಂತಾರು, ಅಣ್ಣಾಜಿ ಗೌಡ ಪೈಲೂರು ಮುಂತಾದವರು ಉಪಸ್ಥಿತರಿದ್ದರು.
ಸಭೆಯಲ್ಲಿ ಇತ್ತೀಚೆಗೆ ಮೃತರಾದ ನವೀನ್ ಸಂಕೇಶ ಮತ್ತು ಬುದ್ದ ಸಂಕೇಶರವರ ಆತ್ಮಕ್ಕೆ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಅಶೋಕ್ ಚೂಂತಾರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.









