ನಾಗಪಟ್ಟಣ ಶಾಲೆಗೆ ದೃಷ್ಟಿ ಚಾರಿಟೇಬಲ್ ಸೊಸೈಟಿ ವತಿಯಿಂದ ಕೊಡುಗೆ

0

ದೃಷ್ಟಿ ಚಾರಿಟೇಬಲ್ ಸೊಸೈಟಿ ವತಿಯಿಂದ ಆಲೆಟ್ಟಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ನಾಗಪಟ್ಟಣ ಇಲ್ಲಿಯ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಬ್ಯಾಗ್, ನೋಟ್ ಪುಸ್ತಕ ಹಾಗೂ ಕೊಡೆಯನ್ನು ವಿತರಿಸಲಾಯಿತು.
ಈ ಸೊಸೈಟಿಯ ಅಧ್ಯಕ್ಷರಾದ ಬಾಲಕೃಷ್ಣ ಭಟ್ ಕೊಡಂಕಿರಿ ಎಲ್ಲ ಮಕ್ಕಳಿಗೆ ವಿತರಿಸಿದರು. ಈ ಸಂದರ್ಭದಲ್ಲಿ ರಾಕೇಶ್ ಕುಂಟಿಕಾನ, ಶಿಕ್ಷಕರು, ಎಸ್.ಡಿ.ಎಂ.ಸಿ. ಯವರು ಉಪಸ್ಥಿತರಿದ್ದರು.