ಎಸ್.ಡಿ.ಪಿ.ಐ. ಸುಳ್ಯ ವಿಧಾನಸಭಾ ಕ್ಷೇತ್ರದ ಜಿ.ಪಂ ಹಾಗೂ ತಾ.ಪಂ ಚುನಾವಣೆಯ ಪೂರ್ವ ಭಾವಿ ಸಭೆ

0

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಸಮಿತಿಯ ವತಿಯಿಂದ ಮುಂಬರುವ ಜಿ.ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆಯು ಸುಳ್ಯ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಬಾಬು ಎನ್ ಸವಣೂರು ರವರ ಅಧ್ಯಕ್ಷತೆಯಲ್ಲಿ ಸವಣೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಸಭೆಗೆ ವೀಕ್ಷಕರಾಗಿ ಆಗಮಿಸಿದ ಎಸ್‌ಡಿಪಿಐ ದ.ಕ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಮಾತನಾಡಿ ಅತೀ ಶೀಘ್ರದಲ್ಲೇ ಜಿ.ಪಂ ಹಾಗೂ ತಾ.ಪಂ ಚುನಾವಣೆ ಘೋಷಣೆ ಯಾಗಲಿದ್ದು ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವೆಲ್ಲಾ ಕಡೆ ಸ್ಫರ್ದೆ ಮಾಡಲು ಸಾಧ್ಯವಿದೆಯೋ ಅಲ್ಲಿ ಈಗಲೇ ಕೆಲಸ ಆರಂಬಿಸಿ ಅಭ್ಯರ್ಥಿಗಳ ಪಟ್ಟಿಯನ್ನು ಆಯಾಯ ಬೂತ್ ,ಗ್ರಾಮ ಸಮಿತಿ ಹಾಗೂ ಬ್ಲಾಕ್ ಸಮಿತಿಯಲ್ಲಿ ಚರ್ಚಿಸಿ ಜಿಲ್ಲಾ ಸಮಿತಿಗೆ ನೀಡಬೇಕು ಹಾಗೂ ಚುನಾವಣಾ ತಯಾರಿಯನ್ನು ನಡೆಸಬೇಕೆಂದು ಕರೆ ನೀಡಿದರು.

ದ.ಕ ಜಿಲ್ಲಾ ಉಪಾಧ್ಯಕ್ಷ ವಿಕ್ಟರ್ ಮಾರ್ಟಿಸ್ ಮಾತನಾಡಿ ವಿರೋಧಿಗಳ ಅವಹೇಳನ,ಸುಳ್ಳಾರೋಪ, ವ್ಯಂಗ್ಯಗಳಿಗೆ ತಲೆಕೆಡಿಸದೆ ಕಾರ್ಯಕರ್ತರನ್ನು ಪಕ್ಷ ಸಂಘಟನೆಗೆ ಬಳಸಿಕೊಂಡು ಚುನಾವಣೆಯಲ್ಲಿ ವಿಜಯಿಯಾಗಿ ವಿರೋಧಿಗಳಿಗೆ ಉತ್ತರ ನೀಡುವ ಕೆಲಸ ಮಾಡಬೇಕೆಂದು ಹೇಳಿದರು.

ಸಭೆಯಲ್ಲಿ ಸುಳ್ಯ ವಿಧಾನಸಭಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುಳ್ಯ ವಿಧಾನಸಭಾ ಕಾರ್ಯದರ್ಶಿ ರಫೀಕ್ ಎಂ.ಎ ಸ್ವಾಗತಿಸಿ, ಸಿದ್ದೀಕ್ ಸವಣೂರು ವಂದಿಸಿದರು