ಗೂನಡ್ಕ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ವಿಶ್ವ ಪರಿಸರ ದಿನಾಚರಣೆ

0


ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಗೂನಡ್ಕದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.


ಸಂಸ್ಥೆಯ ಪ್ರಾಂಶುಪಾಲರಾದ ಶೋಭಾ ಕಿಶೋರ್ ವಿಶ್ವ ಪರಿಸರ ದಿನಾಚರಣೆಯ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು.


ವಿಶ್ವ ಪರಿಸರ ದಿನಾಚರಣೆಯಂದು ಪರಿಸರವನ್ನು ಹೇಗೆ ರಕ್ಷಿಸಬೇಕು ಮತ್ತು ಅದಕ್ಕೆ ಅಗತ್ಯವಿರುವ ಮಾಹಿತಿಯನ್ನು ಇಕೋ ಕ್ಲಬ್ ನ ಅಧ್ಯಕ್ಷೆಯಾಗಿರುವ ಖುಷಿ.ಎ.ಎ ವಿದ್ಯಾರ್ಥಿಗಳಿಗೆ ತಿಳಿಸಿದರು.
ಪ್ಲಾಸ್ಟಿಕ್ ದುಷ್ಪರಿಣಾಮದ ಕುರಿತು ಕಿರು ಪ್ರಹಸನವನ್ನು ಇಕೋ ಕ್ಲಬ್ ನ ಸದಸ್ಯರಿಂದ ಪ್ರದರ್ಶಿಸಲಾಯಿತು.


ಈ ಕಾರ್ಯಕ್ರಮದಲ್ಲಿ ಪರಿಸರ ದಿನಾಚರಣೆಯ ಪ್ರಯುಕ್ತ ಚಿತ್ರಕಲಾಸ್ಪರ್ಧೆ , ಪ್ಲಾಸ್ಟಿಕ್ ಬಳಕೆ ಕಡಿಮೆಗೊಳಿಸಿ ಮರುಬಳಕೆ ಮಾಡುವ ಪರಿಕಲ್ಪನೆಯ ಮಾದರಿಗಳನ್ನು ಮತ್ತು ಭಿತ್ತಿ ಪತ್ರಿಕೆಗಳನ್ನು ಎಲ್ಲಾ ವಿದ್ಯಾರ್ಥಿಗಳು ತಯಾರಿಸಿದರು.


ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶೋಭಾ ಕಿಶೋರ್, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಸರೀನಾ ಫಾತಿಮಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.‌