ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಕರ್ತವ್ಯಕ್ಕೆ ಹಾಜರು

0

ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ಈ ಮೊದಲು ಸೇವೆ ಸಲ್ಲಿಸುತ್ತಿದ್ದ ನವೀನ್ ಚಂದ್ರ ಜೋಗಿ ರವರು ಮತ್ತೆ ಸುಳ್ಯದ ವೃತ ನಿರೀಕ್ಷಕ ಕಚೇರಿಗೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.


ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಳೆದ ನಾಲ್ಕು ತಿಂಗಳ ಹಿಂದೆ ಸುಳ್ಯದಿಂದ ಚಿಕ್ಕಮಂಗಳೂರು ಜಿಲ್ಲೆಯ ತರೀಕೆರೆ ಗ್ರಾಮಾಂತರ ವೃತ್ತಕ್ಕೆ ವರ್ಗಾವಣೆಗೊಂಡು ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.


ಈಗಾಗಲೇ ಸುಳ್ಯದಲ್ಲಿ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಸಿ ಎಮ್ ರವೀಂದ್ರರವರು ಕೂಡ ಚುನಾವಣಾ ಹಿನ್ನೆಲೆಯಲ್ಲಿ ಸುಳ್ಳಕ್ಕೆ ಬಂದಿದ್ದು ಇದೀಗ ಅವರು ಕೂಡ ಮೊದಲು ಕರ್ತವ್ಯ ನಿರ್ವಹಿಸುತ್ತಿದ್ದ ಚಿಕ್ಕಮಂಗಳೂರಿಗೆ ತೆರಳಿರುತ್ತಾರೆ.