ಸುಳ್ಯ ವಿದ್ಯಾರ್ಥಿ ನಿಲಯದಲ್ಲಿ ಕಾನೂನು ಅರಿವು ಕಾರ್ಯಕ್ರಮ

0

ಕಾನೂನು ಸೇವೆಗಳ ಸಮಿತಿ ಸುಳ್ಯ ದಕ್ಷಿಣ ಕನ್ನಡ ಜಿಲ್ಲೆ, ವತಿಯಿಂದ ಜೂ.3 ರಂದು ಸುಳ್ಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.


ಕಾನೂನು ಸೇವೆಗಳ ಸಮಿತಿ ಸುಳ್ಯ ಇದರ ಪ್ಯಾನೆಲ್ ವಕೀಲರಾದ ಜಗದೀಶ್ ಡಿ ಪಿ ಇವರು ಜನನ ಮರಣ ನೋಂದಣಿ ಕಾಯ್ದೆ ಕುರಿತು ಮಾಹಿತಿ ನೀಡಿದರು.

ನ್ಯಾಯವಾದಿ ವಿಪುಲ್ ನೀರ್ಪಾಡಿ ಅತಿಥಿಯಾಗಿ ಭಾಗವಹಿಸಿದ್ದು, ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ಬಾಲಕೃಷ್ಣ ರವರು ಅಧ್ಯಕ್ಷತೆ ವಹಿಸಿದ್ದರು.