ಸವಣೂರು ವಿದ್ಯಾರಶ್ಮಿಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯರಿಗೆ ಸನ್ಮಾನ, ಶಾಲಾ ಪ್ರಾರಂಭೋತ್ಸವ ಸೀತಾರಾಮ ರೈ ಯವರ ಹುಟ್ಟುಹಬ್ಬ ಆಚರಣೆ

0

ಸುಳ್ಯದ ಶಾಸಕಿ ಕು. ಭಾಗೀರಥಿ ಮುರುಳ್ಯರಿಗೆ ಅಭಿನಂದನಾ ಕಾರ್ಯಕ್ರಮ, ಶಾಲಾ ಪ್ರಾರಂಭೋತ್ಸವ ಮತ್ತು ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಕೆ. ಸೀತಾರಾಮ ರೈಯವರ 76ನೇ ಹುಟ್ಟುಹಬ್ಬದ ಆಚರಣೆ ಜೂ. 9ರಂದು ಸವಣೂರು ವಿದ್ಯಾರಶ್ಮಿ ಸಭಾಂಗಣದಲ್ಲಿ ನಡೆಯಿತು.


ಸವಣೂರು ಕೆ. ಸೀತಾರಾಮ ರೈಯವರು ದೀಪ ಬೆಳಗಿಸಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಸಭಾಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷ, ಶಾಲಾ ಆಡಳಿತ ಮಂಡಳಿ ಸದಸ್ಯ ಸುಂದರ ರೈ ಸವಣೂರು, ಶಾಲಾ ಆಡಳಿತ ಮಂಡಳಿ ಸದಸ್ಯೆ ಶ್ರೀಮತಿ ರಶ್ಮಿ ಅಶ್ವಿನ್ ಶೆಟ್ಟಿ, ಶ್ರೀಮತಿ ಕಸ್ತೂರಿಕಲಾ ಎಸ್ ರೈ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ನಾರಾಯಣ ಮೂರ್ತಿ, ಉಪಪ್ರಾಂಶುಪಾಲರಾದ ಶ್ರೀಮತಿ ಪುಷ್ಪಲತಾ ಆಳ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸವಣೂರು ಕೆ. ಸೀತಾರಾಮ ರೈಯವರು ನೂತನ ಶಾಸಕಿ ಕು. ಭಾಗೀರಥಿ ಮುರುಳ್ಯರನ್ನು ಸನ್ಮಾನಿಸಿದರು.

ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲರಾದ ಸೀತಾರಾಮ ಕೇವಳ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. 76ನೇ ಹುಟ್ಟು ಹಬ್ಬವನ್ನು ಆಚರಿಸುತ್ತಿರುವ ಕೆ. ಸೀತಾರಾಮ ರೈಯವರಿಗೆ ಸಂಸ್ಥೆಯ ವತಿಯಿಂದ ಹೂಗುಚ್ಚ‌ ನೀಡಿ ಶುಭಾಶಯ ಕೋರಿದರು.

ವಿದ್ಯಾರ್ಥಿನಿಯರಾದ ಕು. ಶ್ರದ್ಧಾ ಶಾಸಕರನ್ನು ಸಭೆಗೆ ಪರಿಚಯಿಸಿದರು. ಆಯಿಷತ್ ವಫ ಕಾರ್ಯಕ್ರಮ ನಿರೂಪಿಸಿದರು. ಕು. ಸ್ಪರ್ಶ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸಂಸ್ಥೆಯ ಸಿಬ್ಬಂದಿಗಳು ಕೇಕ್ ಕತ್ತರಿಸಿ ಶುಭಕೋರಿದರು.

ಕಾರ್ಯಕ್ರಮದ ಆರಂಭದಲ್ಲಿ ಸವಣೂರು ಬಸದಿಯ ಬಳಿ ಶಾಸಕರನ್ನು ಸ್ವಾಗತಿಸಿ ಮೆರವಣಿಗೆ ಮೂಲಕ ಸಭಾ ಕಾರ್ಯಕ್ರಮಕ್ಕೆ ಕರೆತರಲಾಯಿತು. ಶಾಸಕಿ ಭಾಗೀರಥಿ ಮುರುಳ್ಯ ಧ್ವಜ ಹಾರಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.