ಜೂ.11ರಂದು ಬೆಂಗಳೂರಿನಲ್ಲಿ ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದ ವತಿಯಿಂದ ಭಾವೀ ವಧೂವರರ ಮುಖಾಮುಖಿ ಭೇಟಿ ಕಾರ್ಯಕ್ರಮ

0

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಬೆಂಗಳೂರು ಇದರ ವತಿಯಿಂದ ಭಾವೀ ವಧೂವರರ ಮುಖಾಮುಖಿ ಭೇಟಿ ಕಾರ್ಯಕ್ರಮವು ಬೆಂಗಳೂರಿನ ಲಗ್ಗರೆಯ ನಮ್ಮನೆ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ಜೂ.11ರಂದು ಜರುಗಲಿದೆ.

ಹತ್ತು ಕುಟುಂಬ ಹದಿನೆಂಟು ಗೋತ್ರದ ಗೌಡ ಜನಾಂಗದ ಭಾವೀ ವಧೂವರರು ಇಲ್ಲವೇ ಪೋಷಕರು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದ ಸಂಘಟಕರು ವಿನಂತಿಸಿದ್ದಾರೆ.


ಕಾರ್ಯಕ್ರಮದಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಪೋರೆಯನ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಉಪಾಧ್ಯಕ್ಷೆ ಶ್ರೀಮತಿ ಶಶಿಪ್ರಭಾ ಮಡ್ತಿಲ, ಕಾರ್ಯದರ್ಶಿ ಶ್ರೀಮತಿ ಗಂಗಮ್ಮ ಸುರೇಶ್ ನೆರಿಯನ , ಖಜಾಂಜಿ ಶ್ರೀಮತಿ ವನಿತ ರಾಧಾಕೃಷ್ಣ ಗುತ್ತಿಗಾರುಮೂಲೆ, ಜಂಟಿ ಕಾರ್ಯದರ್ಶಿ ಶ್ರೀಮತಿ ರಾಧಾ ದಾಮೋದರ್ ಕುದುಕುಳಿ ಸೇರಿದಂತೆ ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.