ಗೂನಡ್ಕ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಪ್ರಿ.ಕೆ.ಜಿ , ಎಲ್.ಕೆ.ಜಿ, ಯು.ಕೆ.ಜಿ ಶಾಲಾ ಮಕ್ಕಳ ಆರಂಭೋತ್ಸವ ಕಾರ್ಯಕ್ರಮ

0

ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೂನಡ್ಕದಲ್ಲಿ ಪೂರ್ವ ಪ್ರಾಥಮಿಕ ಶಾಲಾ ಮಕ್ಕಳ ಆರಂಭೋತ್ಸವ ಕಾರ್ಯಕ್ರಮ ಶಾಲಾ ಆವರಣದಲ್ಲಿ ನಡೆಯಿತು.
ಶಿಕ್ಷಣ ಅನ್ನುವಂಥದ್ದು ವಿದ್ಯಾರ್ಥಿ ಜೀವನದ ಮೊದಲ ಘಟ್ಟ ಹಾಗಾಗಿ ಅದು ಜೀವನಪೂರ್ತಿ ನೆನಪಿಟ್ಟುಕೊಳ್ಳುವ ಉದ್ದೇಶದಿಂದ ವಿಭಿನ್ನ ರೀತಿಯಲ್ಲಿ ಪೋಷಕರ ಜೊತೆ ಭಾವಚಿತ್ರ ತೆಗೆದುಕೊಳ್ಳುವುದರ ಮೂಲಕ ಹಾಗೂ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.


ದೀಪ ಪ್ರಜ್ವಲಿಸಿದ ಸಂಸ್ಥೆಯ ಅಧ್ಯಕ್ಷರಾದ ರುಕ್ಮಯ್ಯದಾಸ್ ವಿಧ್ಯಾರ್ಥಿಗಳಿಗೆ ಶುಭ ಹಾರೈಸಿದರು. ಇದು ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳ ವಿದ್ಯಾರ್ಥಿ ಜೀವನದ ಮೊದಲ ದಿನ ಅವರ ಜೀವನ ಉಜ್ವಲವಾಗಲೆಂದು ಪ್ರಾಂಶುಪಾಲರಾದ ಶೋಭಾ ಕಿಶೋರ್ ಆಶಿಸಿದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಶಾಲಾ ಶಿಸ್ತು, ರೀತಿ ನೀತಿ, ನಿಯಮಗಳ ಕುರಿತು ಪೋಷಕರಿಗೆ ತಿಳಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ರುಕ್ಮಯ್ಯದಾಸ್, ಲೀಲಾವತಿ ರುಕ್ಮಯ್ಯದಾಸ್, ಪ್ರಾಂಶುಪಾಲರಾದ ಶೋಭಾ ಕಿಶೋರ್, ಪ್ರಧಾನ ಕಾರ್ಯದರ್ಶಿಗಳಾದ ಕಿಶೋರ್ ಕುಮಾರ್, ಮಾರುತಿ ಫೌಂಡೇಶನ್ ನಿರ್ದೇಶಕರಾದ ಸುಬ್ರಮಣ್ಯ ಆರ್.ಎಂ , ಪೋಷಕರು, ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಶಾಲಾ ಶಿಕ್ಷಕರಾದ ಧನರಾಜ್ ನಿರೂಪಿಸಿ ವಂದಿಸಿದರು.