ಕಡಬ ಬ್ಲಾಕ್ ಕಾಂಗ್ರೆಸ್‌ನಿಂದ ಡಿಸಿಸಿಗೆ ವರದಿ

0


ಡಿಸಿಸಿ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ


ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಪ್ರತಿಕ್ರಿಯೆ


ವಿಧಾನ ಸಭಾ ಚುನಾವಣೆಗಳ ಸಂದರ್ಭದ ಬೆಳವಣಿಗೆಗಳ ಹಿನ್ನಲೆಯಲ್ಲಿ ಪರಾಜಿತ ಅಭ್ಯರ್ಥಿ ಜಿ. ಕೃಷ್ಣಪ್ಪ ಅವರು ನೀಡಿದ ದೂರಿಗೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಗೆ ವರದಿ ಸಲ್ಲಿಸಲಾಗಿದ್ದು, ಅವರು ನೀಡುವ ತೀರ್ಮಾನಕ್ಕೆ ನಾವು ಬದ್ಧ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ನೆಟ್ಟಣ ಅವರು ಪ್ರತಿಕ್ರಿಯಿಸಿದ್ದಾರೆ.
ಚುನಾವಣಾ ಸಂದರ್ಭದ ಬೆಳವಣಿಗೆ ಹಿನ್ನಲೆಯಲ್ಲಿ ಶಿಸ್ತು ಕ್ರಮ, ಅಮಾನತು, ಉಚ್ಛಾಟನೆಗೆ ಸಂಬಂಧಿಸಿ ಕಡಬ ಬ್ಲಾಕ್‌ನ ಹಲವು ನಾಯಕರ ಹೆಸರಿರುವ ಆದೇಶವೊಂದು ಹರಿದಾಡುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಈ ಪತ್ರದ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ನಾವು ಯಾರ ಅಮಾನತಿಗೂ ಸೂಚಿಸಿಲ್ಲ. ಚುನಾವಣಾ ಸಂದರ್ಭದಲ್ಲಿ ಪಕ್ಷದ ಚಟುವಟಿಕೆಗಳಲ್ಲಿ ಈ ನಾಯಕರು ಯಾವ ರೀತಿ ಭಾಗಿಯಾಗಿದ್ದಾರೆ ಎಂಬ ವಿವರವಾದ ಮಾಹಿತಿಯನ್ನು ಜಿಲ್ಲಾ ಕಾಂಗ್ರೆಸ್‌ಗೆ ಕಳುಹಿಸಲಾಗಿದೆ. ಅವರು ನೀಡುವ ತೀರ್ಮಾನಕ್ಕೆ ನಾವು ಬದ್ಧ ಎಂದು ಪ್ರತಿಕ್ರಿಯಿಸಿದ್ದಾರೆ.