ಶಕ್ತಿ ಯೋಜನೆಗೆ ಇಂದು ಮಧ್ಯಾಹ್ನ ಸುಳ್ಯ ಬಸ್ ನಿಲ್ದಾಣದಲ್ಲಿ ಚಾಲನೆ

0

ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ಆರಂಭಕ್ಕೆ ಶಾಸಕರ ಸಾಥ್

ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ರಾಜ್ಯ ಸರಕಾರದ ಶಕ್ತಿ ಯೋಜನೆಗೆ ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ಚಾಲನೆ ನೀಡಲಾಗುತ್ತಿದ್ದು, ಅದೇ ವೇಳೆ ಸುಳ್ಯ ಬಸ್ ನಿಲ್ದಾಣದಲ್ಲೂ ಚಾಲನೆ ಒದಗಿ ಬರಲಿದೆ.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದು, ಉದ್ಘಾಟನಾ ಸಮಾರಂಭಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಪುತ್ತೂರು ವಿಭಾಗ ಸಿದ್ಧತೆ ಮಾಡಿಕೊಂಡಿದೆ.

ಯೋಜನೆಗೆ ಚಾಲನೆ ನೀಡಿದ ಬಳಿಕ ಮಹಿಳೆಯರನ್ನು ಬಸ್ ಗೆ ಸ್ವಾಗತಿಸುವ ಕಾರ್ಯಕ್ರಮ ನಡೆಯಲಿದೆ.

ಈ ಸಮಾರಂಭಕ್ಕೂ ಮುನ್ನ ಕಾಂಗ್ರೆಸ್ ಕೂಡಾ ಈ ಐತಿಹಾಸಿಕ ಯೋಜನೆಯ ಚಾಲನೆಗೆ ಸಂಭ್ರಮಾಚರಣೆ ನಡೆಸಲಿದೆ ಎಂದು ತಿಳಿದು ಬಂದಿದೆ.