ಎನ್ಎಸ್ ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸವಾದ್ ಸುಳ್ಯ ನೇಮಕ

0

ಎನ್‌ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸವಾದ್ ಸುಳ್ಯ ಅವರನ್ನು ನೇಮಕಗೊಳಿಸಲಾಗಿದೆ.

ಕಾಂಗ್ರೆಸ್ ಬಾಲ ಸೇವಾದಳದಲ್ಲಿ ಸಕ್ರಿಯರಾಗಿದ್ದ ಇವರು
ಸುಳ್ಯದ ಕೆವಿಜಿ ನೆಹರೂ ಮೆಮೋರಿಯಲ್ ಕಾಲೇಜ್‌ನಲ್ಲಿ ಪಿಯುಸಿ ಓದುತ್ತಿರುವಾಗಲೇ ಎನ್‌ಎಸ್‌ಯುಐ ವಿದ್ಯಾರ್ಥಿ ಘಟಕಧ ಅಧ್ಯಕ್ಷರಾಗಿ, ಸುಳ್ಯ ನಗರ ಘಟಕದ ಅಧ್ಯಕ್ಷರಾಗಿ, ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ, ಸರ್ವ ಕಾಲೇಜು ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

ರಾಜ್ಯ ಕಾರ್ಯದರ್ಶಿಯಾಗಿ, ದ.ಕ.ಜಿಲ್ಲಾ ಸಮಿತಿಯ ಸಂಚಾಲಕರಾಗಿ, ಎನ್‌ಎಸ್‌ಯುಐ ದ.ಕ. ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ದ.ಕ. ಜಿಲ್ಲಾಧ್ಯಕ್ಷ ರಾಗಿಯೂ ಸೇವೆ ಸಲ್ಲಿಸಿದ್ದರು.