ಮಾವಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

0

ಪೆರಾಜೆಯ ಕೊಳಂಗಾಯದಲ್ಲಿ ನಡೆದ ಘಟನೆ

ಮಾವಿನ ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಿನ್ನೆ ಸಂಜೆ ನಡೆದಿದೆ.

ಪೆರಾಜೆ ಗ್ರಾಮದ ಕೊಳಂಗಾಯ ಕೇಶವ ಕೆ.ಕೆ. ಯವರು ಮನೆ ಸಮೀಪದ ಮಾವಿನ ಮರದಿಂದ ಮಾವಿನಕಾಯಿ ಕೊಯ್ಯುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಕೆಳಗೆ ಬಿದ್ದರು. ಕೂಡಲೇ ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆತಂದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

ಮೃತರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.