ಸುಳ್ಯದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ಯೋಜನಾ ಕಚೇರಿಯ ಸಭಾಂಗಣದಲ್ಲಿ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಸುಳ್ಯ ವಲಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ವಲಯ ಇದರ ಆಶ್ರಯದಲ್ಲಿ ಜೂ. ೧೧ ರಂದು ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು.


ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಲೋಕನಾಥ್ ಅಮೆಚೂರು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಮಹತ್ವವನ್ನು ಹೇಳಿ ಶುಭ ಹಾರೈಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಜನಜಾಗೃತಿ ವೇದಿಕೆ ಸುಳ್ಯ ವಲಯದ ವಲಯ ಅಧ್ಯಕ್ಷರಾದ ವೆಂಕಪ್ಪ ಗೌಡರವರು ದುಶ್ಚಟದಿಂದ ಕೂಡಿದ ಪರಿಸರವನ್ನು ದೂರ ಮಾಡಿ ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಸಾರ್ವಜನಿಕರ ಪಾತ್ರ ಏನು ಅನ್ನುವುದನ್ನು ಉದಾರಣೆ ಸಹಿತ ವಿವರಿಸಿ ಪೂಜ್ಯರ ಕನಸನ್ನು ನನಸು ಮಾಡೋಣ ಎಂದು ಕರೆಕೊಟ್ಟರು.

ಸಭಾಧ್ಯಕ್ಷರಾದ ಕೇರ್ಪಳದ ಒಕ್ಕೂಟದ ಅಧ್ಯಕ್ಷ ಪ್ರಶಾಂತ್ ಭಟ್ ಮುಖ್ಯ ಅತಿಥಿಗಳಾಗಿ ಜನಜಾಗೃತಿ ವೇದಿಕೆಯ ಸದಸ್ಯರಾದ ಬೂಡು ರಾಧಾಕೃಷ್ಣ ರೈ, ಮಲ್ಲೇಶ್ ಬೆಟ್ಟಂಪಾಡಿ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ವಲಯದ ವಲಯಾಧ್ಯಕ್ಷರಾದ ನಿತ್ಯಾನಂದ ಕಲ್ಲೆಂಬಿ ಹಾಗು ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಾಲೂಕಿನ ಮಾಸ್ಟರ್ ಪಿಜಿ ಜಯರಾಮ ರವರು ಕಾರ್ಯಕ್ರಮದ ಪರವಾಗಿ ಶುಭ ಹಾರೈಸಿದರು.

ವಲಯ ಮೇಲ್ವಿಚಾರಕರಾದ ಶ್ರೀಮತಿ ಪ್ರಿಯಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕೇರ್ಪಳ ಒಕ್ಕೂಟ ಕಾರ್ಯದರ್ಶಿ ಮೋಹನ್ ಧನ್ಯವಾದವಿತ್ತರು , ಸೇವಾ ಪ್ರತಿನಿಧಿಯವರಾದ ಪ್ರೇಮಲತಾ,ಸುರೇಶ್, ಸುಳ್ಯ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು, ಪರಿವಾರಕಾನ ಒಕ್ಕೂಟದ ಅಧ್ಯಕ್ಷರು, ಕೇರ್ಪಳ ಒಕ್ಕೂಟದ ಪದಾಧಿಕಾರಿಗಳು, ಗುಂಪಿನ ಸದಸ್ಯರುಗಳು ಭಾಗವಹಿಸಿದ್ದರು.